Select Your Language

Notifications

webdunia
webdunia
webdunia
webdunia

ಅಖಿಲ ಭಾರತ ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ರಿಂದ ಗಾಂಧಿ ಹತ್ಯೆ ಕುರಿತ ಆಕ್ಷೇಪಾರ್ಹ ಹೇಳಿಕೆ

ಅಖಿಲ ಭಾರತ ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ರಿಂದ ಗಾಂಧಿ ಹತ್ಯೆ ಕುರಿತ ಆಕ್ಷೇಪಾರ್ಹ ಹೇಳಿಕೆ
bangalore , ಭಾನುವಾರ, 19 ಸೆಪ್ಟಂಬರ್ 2021 (20:32 IST)
ಬೆಂಗಳೂರು: ಶನಿವಾರ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಿಂದೂ ದೇವಾಲಯಗಳನ್ನ ದ್ವಂಸಮಾಡುತ್ತಿರುವ ವಿಷಯವನ್ನು ಪ್ರಸ್ತಾಪಿಸುವ ವೇಳೆ ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧಿಯನ್ನೆ ಬಿಟ್ಟಿಲ್ಲ ಹತ್ಯೆಮಾಡಿರುವುದಾಗಿ ಹೇಳಿಕೆ ನೀಡಿದ್ದರು. ಕಾನೂನು ಸುವ್ಯವಸ್ಥೆಗೆ ಸವಾಲು ಎಸೆದು ಮಹತ್ಮಾಗಾಂಧಿಜೀ ಅನುಯಾಯಿಗಳಿಗೆ ಬೆದರಿಕೆ ಒಡ್ಡುತ್ತಿರುವ ಧರ್ಮೇಂದ್ರನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಸಮಿತಿಯಿಂದ ಎಸ್.ಮನೋಹರ್ ನೇತೃತ್ವದಲ್ಲಿ ರಾಜಧಾನಿಯ ವಸಂತನಗರದ  ಹೈ ಗೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದರು.  
 
ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಅಖಿಲ ಭಾರತ ಹಿಂದು ಮಹಾಸಭಾದ ರಾಜ್ಯ ಘಟಕದ ಕಾರ್ಯದರ್ಶಿ ಧರ್ಮೇಂದ್ರ ವಿರುದ್ಧ ಇಂದು ದೂರು ಸಲ್ಲಿಸಿದ್ದೇವೆ. ಈ ವ್ಯಕ್ತಿ ನೀಡಿರುವ ಹೇಳಿಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದೆ. ಮಹಾತ್ಮಗಾಂಧಿಜಿ   ಅನುಯಾಯಿಗಳಿಗೆ ಬೆದರಿಕೆ ಹಾಕುವ ಮೂಲಕ ಭಯದ ವಾತವರಣ ಸೃಷ್ಟಿಸುವ ಹೇಳಿಕೆಯನ್ನ ಧರ್ಮೇಂದ್ರ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪ್ರಾಥಮಿಕ ಮಾಹಿತಿ ವರದಿ (ಎಫ್.ಐ.ಆರ್) ದಾಖಲಿಸಿಕೊಂಡು ಕಾನೂನಿನ ಅಡಿಯಲ್ಲಿ ಧರ್ಮೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ದೂರನ್ನು ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು. 
 
ಕೂಡಲೇ ಧರ್ಮೇಂದ್ರ ನೀಡಿರುವ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಮುಂದೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವುದನ್ನ ಮುಂಜಾಗೃತವಾಗಿ ತಡೆಯಲು ಕೂಡಲೇ ಆತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಧ್ಯಮಗಳ ಮೂಲಕ ಪೊಲೀಸ್ ಇಲಾಖೆಗೆ ಒತ್ತಾಯಿಸಿತ್ತೇವೆ ಎಂದು ಎಸ್ ಮನೋಹರ್ ಈ ಸಂದರ್ಭದಲ್ಲಿ  ಹೇಳಿದರು.
akilabaratha

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ 30-40 ಜನರು ರೇವ್‌ ಪಾರ್ಟಿ