Publish Date: Tue, 02 Oct 2018 (19:07 IST)
Updated Date: Tue, 02 Oct 2018 (19:09 IST)
ಮಹಾತ್ಮ ಗಾಂಧೀಜಿಯವರ 150 ಜನ್ಮ ವರ್ಷಾಚರಣೆ ಅಂಗವಾಗಿ ವಿಭಿನ್ನ ಕಾರ್ಯಕ್ರಮ ನಡೆಯಿತು.
ಹಾವೇರಿಯಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ವತಿಯಿಂದ ನಗರದ ಗಾಂಧಿ ಸರ್ಕಾಲ್ ನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಹಾವೇರಿ ಶಾಸಕ ನೆಹರು ಓಲೇಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಾಂಧೀಜಿ ಪುತ್ತಳಿಗೆ ಪುಷ್ಪ ನಮನವನ್ನು ಸಲ್ಲಿಸಿದ್ರು. ಸ್ವತಃ ಶಾಸಕರು, ಡಿಸಿ ಎಂ. ವೆಂಕಟೇಶ, ಜಿಪಂ ಇಸಿಓ ಶಿಲ್ಪಾ ನಾಗ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಮಾಡಿದ್ರು.
ಇನ್ನೂ ಕಾರ್ಯಕ್ರಮದಲ್ಲಿ ಭಾರತೀಯ ಸೇವಾ ದಳ, ಡೊಳ್ಳು ಕುಣಿತ ಕಲಾವಿದರು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ನೆಹರು ಓಲೆಕಾರ, ಜಿಲ್ಲಾಧಿಕಾರಿ ಎಂ. ವೆಂಕಟೇಶ, ಜಿಲ್ಲಾ ಪಂಚಾಯತ್ ಸಿಇಓ ಶಿಲ್ಪ ನಾಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ರು.