Publish Date: Mon, 30 Jan 2023 (17:10 IST)
Updated Date: Mon, 30 Jan 2023 (18:11 IST)
ಬೆಂಗಳೂರು : ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ಈ ದಿನದ ಬಗ್ಗೆ ನಾವು ಚಿಂತನೆ ಮಾಡಿ ಆತ್ಮಾವಲೋಕನ ಮಾಡಿಕೊಂಡು ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಸಂಕಲ್ಪವನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಮಹಾತ್ಮಾ ಗಾಂಧಿಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಮಹಾತ್ಮ ಗಾಂಧಿ ಅವರು ಹೇಳಿರುವಂತೆ ಅವರ ಜೀವನವೇ ಒಂದು ಸಂದೇಶ. ಅವರ ಜೀವನವನ್ನು ಓದಿ, ತಿಳಿದುಕೊಂಡು, ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ಅವರ ಜೀವನದ ಆಧಾರ ನೈತಿಕತೆ ಮತ್ತು ಸತ್ಯ.