Publish Date: Wed, 12 Sep 2018 (17:37 IST)
Updated Date: Wed, 12 Sep 2018 (17:39 IST)
ಗಣೇಶ ಚತುರ್ಥಿ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಣೆ ಆಗಬೇಕು. ಈ ನಿಟ್ಟಿನಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.
ಗೌರಿ ಗಣೇಶ ಹಬ್ಬದ ಮುಂಜಾಗೃತ ಕ್ರಮವಾಗಿ ಕಲಬುರಗಿಯಲ್ಲಿ ರೌಡಿಗಳ ಪರೇಡ್ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದರು.
ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಭಾಗಿಯಾದ 400 ಜನ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಎನ್.ಶಶಿಕುಮಾರ ಎಚ್ಚರಿಕೆ ನೀಡಿದರು.