Select Your Language

Notifications

webdunia
webdunia
webdunia
webdunia

ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ : ಸಿಎಂ

ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ : ಸಿಎಂ
ಚಾಮರಾಜಪೇಟೆ , ಭಾನುವಾರ, 28 ಆಗಸ್ಟ್ 2022 (14:44 IST)
ರಾಯಚೂರು : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಸಂಜೆ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
 
ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳಕ್ಕೆ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತಿದೆ. ನಾನು ಈಗಲೇ ಏನೂ ಹೇಳುವುದಿಲ್ಲ, ಸದ್ಯ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ. ಸಂಜೆ ಸಭೆ ಬಳಿಕ ನಾನು ಬೆಂಗಳೂರಿಗೆ ಹೋದ ಮೇಲೆ ಮುಂದಿನದನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ನಂತರ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತ ರುಪ್ಸಾ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಶಿಕ್ಷಣ ಸಚಿವರು ಆರೋಪದಲ್ಲಿ ಯಾವುದೇ ಹುರುಳಿಲ್ಲ ಅಂತ ಹೇಳಿದ್ದಾರೆ. ನಾನು ಮತ್ತೆ ಅದಕ್ಕೆ ಸ್ಪಷ್ಟೀಕರಣ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧನ!