ಕೊಪ್ಪಳ: ಗಂಗಾವತಿಯಲ್ಲಿ ಇಬ್ಬರು ಮಹಿಳೆಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಗಳನ್ನು ಮಲ್ಲೇಶ್ (22) ಮತ್ತು ಚೇತನ್ಸಾಯಿ ಸಿಳ್ಳೇಕ್ಯಾತರ್(21) ಎಂದು ಗುರುತಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾತಾವತಿ ಗ್ರಾಮೀಣ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಾಗಿರುವ ಆರೋಪಿಗಳಿಬ್ಬರು ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳಾಗಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.