Publish Date: Thu, 26 Aug 2021 (10:27 IST)
Updated Date: Thu, 26 Aug 2021 (10:30 IST)
ಮೈಸೂರು: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಆಗಸ್ಟ್ 24ರ ಸಂಜೆ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖಾ ತಂಡ ರಚಿಸಲಾಗಿದೆ. ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ದಿ, ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಕೃತ್ಯವೆಸಗಿದ ಸ್ಥಳದಲ್ಲಿ ದುಷ್ಕರ್ಮಿಗಳು ಮದ್ಯ ಸೇವನೆ ಮಾಡಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರು ಮೊಬೈಲ್ ಟವರ್ ಜಾಡು ಹಿಡಿದು ಶೋಧಕಾರ್ಯ ಮುಂದುವರೆಸಿದ್ದಾರೆ.