Publish Date: Wed, 25 Aug 2021 (15:48 IST)
Updated Date: Wed, 25 Aug 2021 (15:50 IST)
ಸ್ನೇಹಿತನ ಜೊತೆ ಸುತ್ತಾಡಲು ಬಂದಿದ್ದ
ಯುವತಿ ಮೇಲೆ ಪಾನಮತ್ತ ಯುವಕರು ಗ್ಯಾಂಗ್ ರೇಪ್ ನಡೆಸಿದ ಅಮಾನುಷ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂಬ ದೂರು ಬಂದಿದ್ದು, ಸ್ಥಳಕ್ಕೆ ಡಿಜಿಪಿ ಸೇರಿದಂತೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ಜೊತೆ ಬಂದಿದ್ದ ಸ್ನೇಹಿತನನ್ನು ಥಳಿಸಿದ 5ರಿಂದ 6 ಜನ ಪಾನಮತ್ತ ಯುವಕರು ನಂತರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ ನ ಗುಡ್ಡದಬಳಿ ಎಸ್ ಡಿಎಂ ಕಾಲೇಜಿನ ಎಂಬಿಎ ವಿದ್ಯಾರ್ಥಿನಿ ಮೇಲೆ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು, ವಿದ್ಯಾರ್ಥಿನಿ ಮಹಾರಾಷ್ಟ್ರ ಮೂಲದವರು ಎನ್ನಲಾಗಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ನಗರ ಪೊಲೀಸ್ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ.