Select Your Language

Notifications

webdunia
webdunia
webdunia
webdunia

ಯುವತಿ ಮೇಲೆ ಗ್ಯಾಂಗ್‌ ರೇಪ್, ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ, ಬಿವೈ ವಿಜಯೇಂದ್ರ

vijayendra

Sampriya

ಬೆಂಗಳೂರು , ಭಾನುವಾರ, 18 ಆಗಸ್ಟ್ 2024 (15:53 IST)
Photo Courtesy X
ಬೆಂಗಳೂರು: ನಗರದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ.

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋ ದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ.

ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ.

ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಡಾ ಸಂಕಷ್ಟದ ಮಧ್ಯೆ ನಾಳೆ ಮಂತ್ರಾಲಯಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ