ಬೆಳಗಾವಿಯಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯತಮನ ಜೊತೆ ಸುತ್ತಾಡಲು ತೆರಳಿದ್ದ ಸಂದರ್ಭ ಯುವಕನನ್ನ ಬೆದರಿಸಿದ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಫೆ.15ರಂದೇ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸುಮಾರು 5 ಸದಸ್ಯರ ತಂಡ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಿರುವ ಪೊಲೀಸರು ಮತ್ತಿಬ್ಬರ ಬೇಟೆಗೆ ಬಲೆ ಬೀಸಿದ್ದಾರೆ. ಬಂಧಿತ ಮೂವರು ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.