Publish Date: Tue, 07 Mar 2017 (16:49 IST)
Updated Date: Tue, 07 Mar 2017 (16:51 IST)
ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದ ಒಂಬತ್ತು ಕಾಮುಕರ ಪೈಕಿ ಎಂಟು ಕಾಮುಕರನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ಆರೋಪಿ ನಿಯಾಜ್ ನಾಪತ್ತೆಯಾಗಿದ್ದು ಆತನ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳು ಮನೆಗೆ ನುಗ್ಗಿ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದರು
ಫಯಾಜ್, ಹರುಣ್, ಸಾಧಿಕ್ ಇಲಿಯಾಸ್, ಜಮೀರ್, ನಿಯಾಜ್, ಅಲೀಫ್ ಸಿಖಂದರ್ ಖಾನ್, ಜಮೀಲಾ ಆರೋಪಿಗಳಾಗಿದ್ದು, ನಿಯಾಜ್ ಪರಾರಿಯಾಗಿದ್ದಾನೆ,
ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಮತ್ತೊಬ್ಬ ಆರೋಪಿಯ ಸುಳಿವು ದೊರೆತಿದ್ದು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.