ಮೈಸೂರು(ಆ.26): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳ ಸುಳಿವು ಸಿಗದ ಕಾರಣ ಪೊಲೀಸರು ಮತ್ತಷ್ಟು ಸಾಕ್ಷಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.