Publish Date: Mon, 22 Oct 2018 (06:59 IST)
Updated Date: Mon, 22 Oct 2018 (07:01 IST)
ಬಿಹಾರ : ಜಾತ್ರೆ ಮುಗಿಸಿ ಮನೆಗೆ ಬರುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಬಿಹಾರದ ಚಪ್ರಾ ಜಿಲ್ಲೆಯಲ್ಲಿ ನಡೆದಿದೆ.
ಅ.18 ರಂದು ಬಾಲಕಿ ಜಾತ್ರೆ ಮುಗಿಸಿ ಮನೆಗೆ ಬರುತ್ತಿದ್ದಾಗ ದಾರಿಯ ಮಧ್ಯೆ ಎದುರಾದ ಇಬ್ಬರು, ಮಾರಕಾಸ್ತ್ರಗಳನ್ನು ಹಿಡಿದು, ಆಕೆಯನ್ನು ಹೆದರಿಸಿ ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡಿದ್ದಾರೆ.
ಈ ವಿಚಾರವನ್ನು ಯಾರಿಗೂ ತಿಳಿಸದ ಬಾಲಕಿ ಶನಿವಾರದಂದು ತನ್ನ ಪೋಷಕರ ಬಳಿ ಹೇಳಿದ್ದಾಳೆ. ಕೂಡಲೇ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.