ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದ್ದು, ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡೋದೆ ಹಾಸ್ಯಾಸ್ಪದವಾಗಿದೆ ಎಂದು ಕಾಂಗ್ರೆಸ್ ಪ್ರತಿಭಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.ಕಾಂಗ್ರೆಸ್‌ನ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾತನಾಡಿದ ಅವರು , ಲೋಕಾಯುಕ್ತ ಸಂಸ್ಥೆ ಮುಚ್ಚಿದಂತಹ ಪುಣ್ಯಾತ್ಮರು ಇಂದು ಪ್ರತಿಭಟನೆ ಮಾಡುತ್ತಿದ್ದಾರೆ.ಸ್ವತಂತ್ರ ಸಂಸ್ಥೆ ಲೋಕಾಯುಕ್ತವನ್ನು ಯಾಕೆ ಮುಚ್ಚಿದ್ದು ಎಂದು ಗೊತ್ತಿದೆ. 69 ಪ್ರಕರಣ ಅವರ ಮೇಲಿತ್ತು.ಅದಕ್ಕಾಗಿ ಲೋಕಾಯುಕ್ತವನ್ನು ಮುಚ್ಚಿದರು ಎಂದು ಆರೋಪಿಸಿದರು.ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಸರ್ಕಾರದ ಆಡಳಿತ ಭಾಗವಾಗಿತ್ತು. ಅವರು ಮಾಡಿದ ಕರ್ಮಕಾಂಡ ಮುಚ್ಚಿ ಹಾಕಲು ಲೋಕಾಯುಕ್ತ ಮುಚ್ಚಿದರು. ಜನ ಇದನ್ನು ಒಪ್ಪಲ್ಲ. ಅವರ ಎಲೆಯಲ್ಲಿ ಕತ್ತೆ ಬಿದ್ದಿದೆ ಅದನ್ನು ಮೊದಲು ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.