Publish Date: Thu, 07 Jul 2022 (14:28 IST)
Updated Date: Thu, 07 Jul 2022 (14:29 IST)
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇರ್ಫಾನ್ ಖಾನ್, ಸೈಯದ್ ನೂರ್ ಹಾಗೂ ಅಫ್ಜಲ್ ಖಾನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಆಂಧ್ರಪ್ರದೇಶದಿಂದ ಮಾದಕವಸ್ತುಗಳನ್ನು ಆಮದು ಮಾಡಿಕೊಂಡು ಬೆಂಗಳೂರಿನ ಪ್ರಮುಖ ನಗರಗಳಲ್ಲಿ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 61 ಕೆ.ಜಿ ಗಾಂಜಾ, 1 ಕಾರು, 1ಬೈಕ್ ಹಾಗೂ 3ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಈ ಹಿಂದೆ ಡಿ.ಜೆ ಹಳ್ಳಿ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದರು ಎನ್ನಲಾಗಿದೆ.