Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ವಹಿಸಲು ಸರಕಾರ ಚಿಂತನೆ

ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ವಹಿಸಲು ಸರಕಾರ ಚಿಂತನೆ
ಬೆಂಗಳೂರು , ಶನಿವಾರ, 9 ಜುಲೈ 2016 (17:27 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
 
ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕೆ.ಜೆ.ಜಾರ್ಜ್ ಸೇರಿದಂತೆ ಮೂವರು ಅಧಿಕಾರಿಗಳು ರಾಜೀನಾಮೆ ನೀಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. 
 
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುತ್ತೀರಾ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷಗಳು ಹೇಳಿದಂತೆ ಕೇಳಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜನಾಥ್ ಪ್ರಜ್ಞಾ ಠಾಕೂರ್ ಭೇಟಿ ಮಾಡಿಯೇ ಇಲ್ಲ: ಬಿಜೆಪಿ