Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ: ರಾಜ್ಯ ಸರಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಗಣಪತಿ ಆತ್ಮಹತ್ಯೆ: ರಾಜ್ಯ ಸರಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಯಾದಗಿರಿ , ಸೋಮವಾರ, 11 ಜುಲೈ 2016 (12:42 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಯಾದಗಿರಿಯಲ್ಲಿ ಸುದ್ದಿಗಾರರೊಂದೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹೆಸರು ಕೇಳಿಬಂದಿದೆ. ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇ ಬೇಕು. ಇಲ್ಲದಿದ್ದರೆ, ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಸರಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಮುಚ್ಚಿಹಾಕಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸತ್ತ ಪತಿಯ ವೀರ್ಯಕ್ಕಾಗಿ ವೈದ್ಯರಲ್ಲಿ ಮನವಿ