Publish Date: Mon, 14 Feb 2022 (15:43 IST)
Updated Date: Mon, 14 Feb 2022 (16:45 IST)
ಬಿಬಿಎಂಪಿ ಹಾಗೂ ಸುತ್ತಮುತ್ತಲಿನ ತಗ್ಗು ಪ್ರದೇಶಗಳಲ್ಲಿ ಹಾಕಲಾಗಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೊಮ್ಮ ನಹಳ್ಳಿಯ ಬಂಡೆಪಾಳ್ಯದಲ್ಲಿ ನಡೆದಿದೆ. ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಸುತ್ತಮುತ್ತ ದಟ್ಟವಾಗಿ ಹೊಗೆ ಆವರಿಸಿಕೊಂಡಿತ್ತು.
ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಸುಮಾರು ಮೂರು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸ್ಥಳಕ್ಕೆ ಬಂಡೇಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.