Publish Date: Wed, 10 Aug 2022 (21:55 IST)
Updated Date: Wed, 10 Aug 2022 (21:58 IST)
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವುದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಹೆದ್ದಾರಿಯಲ್ಲಿ ಉಳಿದ ವಾಹನ ಸಂಚಾರ ಬಂದ್ ಮಾಡಲಾಗಿದೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಸಾಗುತ್ತಿತ್ತು. ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಮುಂಜಾಗೃತಾ ಕ್ರಮಕೈಗೊಂಡಿದ್ದಾರೆ. ಲಘು ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು, ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಮಂಗಳೂರು ಕಡೆಯಿಂದ ಬರುವ ವಾಹನಕ್ಕೆ ಗೇರುಸೊಪ್ಪಾ ಮಾರ್ಗದ ಆರೊಳ್ಳಿ ಸಾಲ್ಕೋಡು, ಅರೇ ಅಂಗಡಿ ಮಾರ್ಗವಾಗಿ ಚಂದಾವರ ಮೂಲಕ ಕುಮಟಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಳಸುವಂತೆ ಸೂಚಿಸಲಾಗಿದೆ.