Daily Horoscope
✕

ಗ್ಯಾಸ್ ವಾಹನ ಪಲ್ಟಿ: ಬೆಂಕಿ ಉರಿದಂತೆ ಎಚ್ಚರಿಕೆ

Webdunia
ಭಾನುವಾರ, 2 ಡಿಸೆಂಬರ್ 2018 (18:05 IST)
ಅನಿಲ ಟ್ಯಾಂಕರೊಂದು ಮಗುಚಿ ಬಿದ್ದು, ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿಯ ಬೆದ್ರೋಡಿ ಎಂಬಲ್ಲಿ  ತಡರಾತ್ರಿ ಅನಿಲ ಟ್ಯಾಂಕರೊಂದು ಮಗುಚಿ ಬಿದ್ದಿದೆ. ಟ್ಯಾಂಕರ್ ಬಿದ್ದ ರಭಸಕ್ಕೆ ಅಪಾರ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಆಸುಪಾಸಿನ ಸುಮಾರು 2 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ ಬೆಂಕಿ ಉರಿಸದಂತೆ ಎಚ್ಚರಿಕೆ ನೀಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.

ತಡರಾತ್ರಿ 2 ಗಂಟೆ ಸುಮಾರಿಗೆ ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಭಾರತ್ ಪೆಟ್ರೋಲಿಯಂ ಕಂಪೆನಿಯ ಅನಿಲ ಟ್ಯಾಂಕರ್ ಬೆದ್ರೋಡಿಯ ತೂಗುಸೇತುವೆಯ ಬಳಿಯ ತಿರುವಿನಲ್ಲಿ ಮಗುಚಿಬಿದ್ದಿದೆ.

ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪರಿಸರದ ನಿವಾಸಿಗಳಿಗೆ ಬೆಂಕಿ ಉರಿಸದಂತೆ ಎಚ್ಚರಿಕೆ ನೀಡಲಾಗಿದೆ. ಹತ್ತಿರದ ಮನೆಯವರನ್ನು   ತಡರಾತ್ರಿಯೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅನಿಲ ಶಿಪ್ಪಿಂಗ್ ಕಾರ್ಯ ನಡೆಯುತ್ತಿದ್ದು, ಇದಕ್ಕಾಗಿ ಸ್ಥಳಕ್ಕೆ ಮೂರು ಖಾಲಿ ಟ್ಯಾಂಕರ್‌ಗಳನ್ನು ತರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪೆರಿಯಶಾಂತಿ ಹಾಗೂ ಹಳೆಗೇಟು ಬಳಿ ವಾಹನಗಳನ್ನು ತಡೆದು ಬದಲಿ ಮಾರ್ಗದಲ್ಲಿ ಕಳುಹಿಸಲಾಗುತ್ತಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ, ಪೊಲೀಸರು ಇದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments