Webdunia - Bharat's app for daily news and videos

Install App

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

Sampriya
ಮಂಗಳವಾರ, 12 ಆಗಸ್ಟ್ 2025 (14:50 IST)
ತುಮಕೂರು: ಕಾಂಗ್ರೆಸ್‌ ಹೈಕಮಾಂಡ್‌ನ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡ ಕೆ.ಎನ್‌. ರಾಜಣ್ಣ ಅವರ ತವರು ಕ್ಷೇತ್ರ ಮಧುಗಿರಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. 

ರಾಜಣ್ಣ ಅಭಿಮಾನಿಗಳು ಮಧುಗಿರಿ ಪಟ್ಟಣ ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಅವರನ್ನು ಪೊಲೀಸರು ತಡೆದರು. 

ಎಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.  ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು. 

ತುಮಕೂರು ಗೇಟ್‌ನ ರಸ್ತೆಯಲ್ಲಿ ಪ್ರತಿಭಟನಾಕಾರರು ಧರಣಿ ಕುಳಿತರು. ಇದೇ ವೇಳೆ, ಬೇಕರಿಯೊಂದಕ್ಕೆ ನುಗ್ಗಲು ಪ್ರಯತ್ನಿಸಿದರು. ಎಂಜಿ ಕ್ರೀಡಾಂಗಣದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದರು. ಅಭಿಮಾನಿಯೊಬ್ಬ ವಿಷ ಕುಡಿಯಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು. ಆತನನ್ನು ತಕ್ಷಣವೇ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೊಬ್ಬ ಮೈಮೇಲೆ ಪೆಟ್ರೋಲ್‌ ಸುರಿದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಸಡಿಲ ಹೇಳಿಕೆಗಳ ಮೂಲಕವೇ ಪಕ್ಷದೊಳಗಡೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸಂಪುಟದಿಂದ ವಜಾಗೊಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments