Publish Date: Thu, 22 Feb 2018 (18:39 IST)
Updated Date: Thu, 22 Feb 2018 (18:40 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸ್ಪಷ್ಟ ಮಾಹಿತಿ ದೊರೆತಿದ್ದು, ಇನ್ನೊಂದು ವಾರದಲ್ಲಿ ಬಹಿರಂಗ ಪಡಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯ ಸಾಹಿತಿ ಕಲ್ಬುರ್ಗಿಯವರ ಹತ್ಯೆಗೆ ಸಂಬಂಧ ನಿಖರ ಮಾಹಿತಿ ದೊರೆತಿಲ್ಲ. ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಹಿತಿ ದೊರೆತಿದೆ ಎಂದಿದ್ದಾರೆ.
ಕಲ್ಬುರ್ಗಿ ಅವರ ಪ್ರಕರಣದ ಸತ್ಯ ಮಾಹಿತಿಯನ್ನು ಕಲೆ ಹಾಕುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.