Publish Date: Thu, 14 Sep 2017 (19:09 IST)
Updated Date: Thu, 14 Sep 2017 (19:10 IST)
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ.
ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಪಂಜಿನ ಮೆರವಣಿಗೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ರೈತ ಸಂಘ ಪ್ರಗತಿಪರ ಸಂಘಟನೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.
ಪ್ರಗತಿಪರ ಚಿಂತಕರು, ವಿಚಾರವಾದಿಗಳು ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಹಿರಿಯ ಸಂಶೋಧಕ ಕಲಬುರಗಿ ಹತ್ಯೆಯಾಗಿ ಎರಡು ವರ್ಷಗಳೇ ಕಳೆದಿದ್ದರೂ ಹಂತಕರ ಪತ್ತೆಯಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ರಚಿಸಿದ ಎಸ್‌ಐಟಿ ತಂಡ ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಪ್ರಗತಿಪರ ಚಿಂತಕರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.