Publish Date: Wed, 06 Sep 2017 (17:44 IST)
Updated Date: Wed, 06 Sep 2017 (17:52 IST)
ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಾಮರಾಜಪೇಟೆಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.
ಗೌರಿ ಲಂಕೇಶ್ ಕುಟುಂಬ ಸದಸ್ಯರ ಜೊತೆ ಸಿಎಂ ಸಿದ್ದರಾಮಯ್ಯ, ಸಚಿವೆ ಉಮಾಶ್ರಿ, ಗೃಹ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಜಮೀರ್ ಅಹಮ್ಮದ್ ಸೇರಿದಂತೆ ಅಪಾರ ಪ್ರಮಾಣದ ಅಭಿಮಾನಿಗಳು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು. ಎಲ್ಲಡೆ ದುಃಖ ಮಡುಗಟ್ಟಿತ್ತು. ಕುಟುಂಬ ಸದಸ್ಯರಿಗೆ ಸಿಎಂ ಧೈರ್ಯ ಹೇಳಿದರು.
ಗೌರಿ ಲಂಕೇಶ್ ಆಶಯದಂತೆ ಯಾವುದೇ ಧಾರ್ಮಿಕ ವಿಧಿ ವಿಧಾನಗಳನ್ನ ಅಂತ್ಯ ಸಂಸ್ಕಾರದ ವೇಳೆ ನೆರವೇರಿಸಲಿಲ್ಲ. ಹೂಗುಚ್ಛವಿರಿಸಿ ಅಂತ್ಯಸಂಸ್ಕಾರ ನೆರವೇರಿಸಿದರು. ತಂದೆ ಪಿ. ಲಂಕೇಶ್ ಅಂತ್ಯಸಂಸ್ಕಾರದ ವೇಳೆಯೂ ಧಾರ್ಮಿಕ ವಿಧಿ ವಿಧಾನ ನೆರವೇರಿಸಲು ಗೌರಿ ಲಂಕೇಶ್ ವಿರೋಧ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ