Select Your Language

Notifications

webdunia
webdunia
webdunia
Friday, 28 February 2025
webdunia

ಎಸ್‌ಐಟಿ ತನಿಖೆಗೆ ಗೌರಿ ಲಂಕೇಶ್ ಹತ್ಯೆ ಕೇಸ್ : ಸಿಎಂ

ಎಸ್‌ಐಟಿ ತನಿಖೆಗೆ ಗೌರಿ ಲಂಕೇಶ್ ಹತ್ಯೆ ಕೇಸ್ : ಸಿಎಂ
ಬೆಂಗಳೂರು , ಬುಧವಾರ, 6 ಸೆಪ್ಟಂಬರ್ 2017 (12:44 IST)
ಹಿರಿಯ ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ವಿಶೇಷ ತಂಡದಿಂದ ತನಿಖೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲಾಗುವುದು ಎಂದು ತಿಳಿಸಿದ್ದಾರೆ.
 
ಸಭೆಯಲ್ಲಿ ಸಿಬಿಐಗೆ ಕೊಡುವ ಬಗ್ಗೆ ಕೂಡಾ ಗಂಭೀರವಾಗಿ ಚರ್ಚೆ ನಡೆದಿದೆ. ಆದರೆ, ಕೊನೆಗೆ ವಿಶೇಷ ತನಿಖಾ ತಂಡ ರಚಿಸಿ ಗೌರಿ ಲಂಕೇಶ್ ಪ್ರಕರಣವನ್ನು ಭೇಧಿಸಬೇಕು ಎನ್ನುವ ಒಲವು ವ್ಯಕ್ತವಾಯಿತು ಎಂದು ಮಾಹಿತಿ ನೀಡಿದ್ದಾರೆ.
 
ಗೌರಿ ಲಂಕೇಶ್ ಅವರ ಮೇಲೆ ಆರೋಪಿಯೊಬ್ಬ ಗುಂಡುಹಾರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಕೇಸ್ ಸಿಬಿಐ ತನಿಖೆಗೆ ವಹಿಸಲು ಸರಕಾರ ಚರ್ಚೆ