Publish Date: Sat, 09 Sep 2017 (15:33 IST)
Updated Date: Sat, 09 Sep 2017 (15:35 IST)
ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ತಾಯಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೌರಿ ಲಂಕೇಶ್ ತಾಯಿ ಇಂದಿರಾ, ಸಹೋದರಿ ಕವಿತಾ ಲಂಕೇಶ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಗೌರಿ ಹಂತಕರ ಸುಳಿವು ದೊರೆತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ನೀಡಿದ ಹೇಳಿಕೆಯ ಮಧ್ಯೆ ಗೌರಿ ಕುಟುಂಬದವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿಕೆಯಿಂದ ಹಂತಕರು ಶೀಘ್ರದಲ್ಲಿಯೇ ಪತ್ತೆಯಾಗಲಿದ್ದಾರೆ ಎನ್ನುವ ವಿಶ್ವಾಸವನ್ನು ಗೌರಿ ಲಂಕೇಶ್ ಕುಟುಂಬದವರು ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.