Publish Date: Wed, 06 Sep 2017 (13:04 IST)
Updated Date: Wed, 06 Sep 2017 (13:07 IST)
ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ಹತ್ಯೆಯಾದ ಗೌರಿ ಲಂಕೇಶ್ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗೌರಿ ಲಂಕೇಶ್ ಮರಣೋತ್ತರ ಪರೀಕ್ಷೆ ನಡೆದಿದ್ದು, ಒಂದು ಗುಂಡು ನೇರವಾಗಿ ಹೃದಯಕ್ಕೆ ತಲುಪಿದೆ. ಮತ್ತೆರಡು ಗುಂಡುಗಳು ದೇಹವನ್ನು ಹೊಕ್ಕಿವೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.
ಮರಣೋತ್ತರ ಪರೀಕ್ಷೆಯ ನಂತರ ಗೌರಿ ಲಂಕೇಶ್ ಮೃತದೇಹವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ರವಾನಿಸಲಾಗಿದ್ದು ಮೂರು ಗಂಟೆಗಳವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚಾಮರಾಜಪೇಟೆಯಲ್ಲಿರುವ ಸ್ಮಶಾನಭೂಮಿಯಲ್ಲಿ ಗೌರಿ ಲಂಕೇಶ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.