ಗವಿಗಂಗಾಧರೇಶ್ವರನ ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡಿ: ಕಾದಿದ್ಯಾ ಅಪಾಯ

Sampriya
ಮಂಗಳವಾರ, 14 ಜನವರಿ 2025 (17:52 IST)
Photo Courtesy X
ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ  ವಿಶೇಷ ವಿಸ್ಮಯಕ್ಕೆ ಮೋಡ ಅಡ್ಡಿಯಾಗಿದ್ದು, ಭಕ್ತರಿಗೆ ನಿರಾಸೆಯಾಗಿದೆ.

ಸಂಜೆ 5:14 ರಿಂದ 5:17ರ ವರೆಗೆ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಬೇಕಿತ್ತು. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಗಮಿಸಿದ್ದರು. ಆದರೆ ಮೋಡ ಕವಿದ ವಾತಾವರಣದಿಂದ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ ಸಾಧ್ಯವಾಗಲಿಲ್ಲ.

ಮೊದಲು ದೇವರ ಅಭಿಷೇಕಕ್ಕೆ ಪೂರ್ಣಕುಂಭ ಕಳಸದೊಂದಿಗೆ ದೇವಸ್ಥಾನಕ್ಕೆ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಆಗಮಿಸಿದರು. ಈ ವೇಳೆ ಗವಿಗಂಗಾಧರೇಶ್ವರನಿಗೆ ಪೂರ್ಣಕುಂಭ ಅಭಿಷೇಕ ಮಾಡಲಾಯಿತು.

ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷಪೂಜೆ, ಅಲಂಕಾರದ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಮಧ್ಯಾಹ್ನ ಗವಿಗಂಗಾಧರೇಶ್ವರ ದೇವಾಲಯ ಬಂದ್ ಮಾಡಲಾಗಿತ್ತು. ಮಧ್ಯಾಹ್ನ 12:30 ರಿಂದ ಸಂಜೆ 4ರ ವರೆಗೆ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ.

ಸೂರ್ಯ ರಶ್ಮಿ ಸ್ಪರ್ಶ ಕಣ್ತುಂಬಿಕೊಳ್ಳಲು ದೇವಾಲಯದ ಹೊರಗೆ ಎಲ್‌ಇಡಿ ವ್ಯವಸ್ಥೆ ಮಾಡಲಾಗಿತ್ತು. ಸೂರ್ಯ ರಶ್ಮಿ ಸ್ಪರ್ಶವಾಗದ ಹಿನ್ನೆಲೆ, ಭಕ್ತರ ಆತಂಕ ದೂರ ಮಾಡಲು ದೇವಾಲಯದಲ್ಲಿ ಶಾಂತಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments