Daily Horoscope

ಸಿದ್ದರಾಮಯ್ಯ ಕಾಲಿಗೆ ಬಿದ್ದ ಗೀತಾ ಶಿವರಾಜ್ ಕುಮಾರ್

Krishnaveni K
ಗುರುವಾರ, 2 ಮೇ 2024 (15:33 IST)
ಶಿವಮೊಗ್ಗ: ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಬೃಹತ್ ಚುನಾವಣಾ ಸಮಾವೇಶ ನಡೆಸಿದ್ದು, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆಯಂತಹ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ.

ಶಿವಮೊಗ್ಗದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಸಮಾವೇಶಕ್ಕೆ ಗೀತಾ ಜೊತೆಗೆ ಶಿವರಾಜ್ ಕುಮಾರ್ ಕೂಡಾ ಆಗಮಿಸಿದ್ದರು. ಈ ವೇಳೆ ಸಿದ್ದರಾಮಯ್ಯನವರನ್ನು ಭೇಟಿಯಾದ ಗೀತಾ ಶಿವರಾಜ್ ಕುಮಾರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

ಇನ್ನೊಂದೆಡೆ ಶಿವಣ್ಣ ಕೂಡಾ ಸಿದ್ದರಾಮಯ್ಯನವರ ಜೊತೆ ಆತ್ಮೀಯವಾಗಿ ಕಾಲ ಕಳೆದರು. ಶಿವಣ್ಣನನ್ನು ಕಂಡ ಕೂಡಲೇ ಬಾಚಿ ತಬ್ಬಿಕೊಂಡ ಸಿದ್ದರಾಮಯ್ಯ ಕುಶಲೋಪರಿ ನಡೆಸಿದ್ದಾರೆ. ಶಿವಮೊಗ್ಗದ ಇಂದಿನ ಪ್ರಚಾರ ಸಭೆಯಲ್ಲಿ ಈ ಎರಡು ಫೋಟೋಗಳು ಎಲ್ಲರ ಗಮನ ಸೆಳೆಯುತ್ತಿದೆ.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಜೊತೆ ಶಿವರಾಜ್ ಕುಮಾರ್ ಕೂಡಾ ಇಂದು ಸಮಾವೇಶದಲ್ಲಿ ವೇದಿಕೆ ಹಂಚಿಕೊಂಡರು. ಬಳಿಕ ಸಮಾವೇಶವನ್ನುದ್ದೇಶಿಸಿ ಪತ್ನಿ ಪರವಾಗಿ ಶಿವಣ್ಣ ಭಾಷಣ ಕೂಡಾ ಮಾಡಿದ್ದು, ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments