ಗೀತಾ ಶಿವರಾಜಕುಮಾರ್ ನಾಮಪತ್ರಕ್ಕೆ ಹರಿದು ಬಂದ ಜನಸಾಗರ

Sampriya
ಸೋಮವಾರ, 15 ಏಪ್ರಿಲ್ 2024 (17:04 IST)
Photo Courtesy X
ಶಿವಮೊಗ್ಗ: ಹೈವೋಲ್ಟ್‌ಜ್ ಲೋಕಸಭಾ ಕ್ಷೇತ್ರ ಎಂದು ಕರೆಸಿಕೊಂಡಿರುವ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನೂ ಉರಿಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್‌ನ ಲಕ್ಷಕ್ಕೂ ಹೆಚ್ಚು ಬೆಂಬಲಿಗರೂ ಇವರಿಗೆ ಬೆಂಬಲ ಸೂಚಿಸಿ, ಕಾಂಗ್ರೆಸ್ ಶಕ್ತಿ ಪ್ರದರ್ಶಿಸಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪರ ಪುತ್ರಿ ಗೀತಾ ಶಿವರಾಜಕುಮಾರ್ ಅವರು ಬಿಜೆಪಿ ಸ್ಪರ್ಧಿ ಬಿ ವೈ ರಾಘವೇಂದ್ರ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ವಿರುದ್ಧ ಕಣಕ್ಕಿಳಿಯಲಿದ್ದಾರೆ.  

ಇನ್ನು ಕಣದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಹಾಗೂ ಮಾಜಿ ಉಪಮುಖ್ಯಮಂತ್ರಿ ಸ್ಪರ್ಧಿಸುತ್ತಿರುವುದರಿಂದ ಈ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಿದೆ. ಇಂದು ನಾಮಪತ್ರ ಸಲ್ಲಿಕೆಯಲ್ಲಿ ಕಾಂಗ್ರೆಸ್‌ ಮೆರವಣಿಗೆಯಲ್ಲಿ ಲಕ್ಷಕ್ಕೂ ಮಂದಿ ಉರಿಬಿಸಿಲನ್ನೂ ಲೆಕ್ಕಿಸದೆ ಗೀತಾ ಅವರಿಗೆ ಬೆಂಬಲ ಸೂಚಿಸಿದರು. ಈ ಮೂಲಕ ನಾಮಪತ್ರದ ವೇಳೆಯೇ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆಯವರಿಗೆ ಗೀತಾ ಶಿವರಾಜಕುಮಾರ್ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇತರರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಮುಂದಿನ ಸುದ್ದಿ
Show comments