Publish Date: Tue, 26 Mar 2024 (18:04 IST)
Updated Date: Tue, 26 Mar 2024 (18:12 IST)
ಶಿವಮೊಗ್ಗ : ಇಲ್ಲಿನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ -ಶಿಕಾರಿಪುರದಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿದರು. ಈ ವೇಳೆ ಪತಿ ಶಿವರಾಜಕುಮಾರ್ ಕೂಡ ಇದ್ದರು.
ಮುಂಬರುವ ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಕಣಕ್ಕಿಳಿದಿರುವ ಗೀತಾ ಅವರಿಗೆ ಸಹೋದರ ಸಚಿವ ಮಧು ಬಂಗಾರಪ್ಪ ಹಾಗೂ ಪತಿ ಶಿವರಾಜ್‌ಕುಮಾರ್ ಸಾಥ್ ನೀಡುತ್ತಿದ್ದಾರೆ.
ಗೀತಾಶಿವರಾಜಕುಮಾರ್ ಅವರು ಇಂದು ಬೆಳಗ್ಗೆ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಮತ್ತು ಕೋಟೆ ಸೀತಾರಾಮಾಂಜನೇಯ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿಧಾನಸಭಾಕ್ಷೇತ್ರ ಶಿಕಾರಿಪುರಕ್ಕೆ ತೆರಳಿದ ಗೀತಾಶಿವರಾಜಕುಮಾರ್ ಅವರು ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು. ಇನ್ನೂ ಗೀತಾ ಶಿವರಾಜಕುಮಾರ್ ಸ್ವಾಗತಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಿವಣ್ಣ ಅಭಿಮಾನಿಗಳು ಆಗಮಿಸಿದ್ದರು.
ಈ ವೇಳೆ ಕಾಂಗ್ರೇಸ್ ಮುಖಂಡರಾದ ಎಂ.ಶ್ರೀಕಾಂತ್, ಮಾಜಿ ಎಂಎಲ್ ಸಿ ಆರ್.
ಪ್ರಸನ್ನಕುಮಾರ್,ಮಾಜಿ ಮೇಯರ್ ಎಸ್.ಕೆ ಮರಿಯಪ್ಪ ಇದ್ದರು.