ಪ್ರಚಾರಕ್ಕೂ ಮುನ್ನಾ ದೇವಸ್ಥಾನಗಳಿಗೆ ಭೇಟಿ ಕೊಟ್ಟ ಗೀತಾ ಶಿವರಾಜಕುಮಾರ್

Sampriya
ಮಂಗಳವಾರ, 26 ಮಾರ್ಚ್ 2024 (18:04 IST)
ಶಿವಮೊಗ್ಗ :  ಇಲ್ಲಿನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ -ಶಿಕಾರಿಪುರದಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿದರು. ಈ ವೇಳೆ ಪತಿ ಶಿವರಾಜಕುಮಾರ್ ಕೂಡ ಇದ್ದರು.

ಮುಂಬರುವ ಲೋಕಸಭೆ  ಚುನಾವಣೆಗೆ ಶಿವಮೊಗ್ಗದಿಂದ ಕಣಕ್ಕಿಳಿದಿರುವ ಗೀತಾ ಅವರಿಗೆ ಸಹೋದರ ಸಚಿವ ಮಧು ಬಂಗಾರಪ್ಪ ಹಾಗೂ ಪತಿ ಶಿವರಾಜ್‌ಕುಮಾರ್ ಸಾಥ್ ನೀಡುತ್ತಿದ್ದಾರೆ.

ಗೀತಾಶಿವರಾಜಕುಮಾರ್ ಅವರು ಇಂದು ಬೆಳಗ್ಗೆ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಮತ್ತು ಕೋಟೆ ಸೀತಾರಾಮಾಂಜನೇಯ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿಧಾನಸಭಾಕ್ಷೇತ್ರ ಶಿಕಾರಿಪುರಕ್ಕೆ ತೆರಳಿದ   ಗೀತಾಶಿವರಾಜಕುಮಾರ್ ಅವರು ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು. ಇನ್ನೂ ಗೀತಾ ಶಿವರಾಜಕುಮಾರ್‌ ಸ್ವಾಗತಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಿವಣ್ಣ ಅಭಿಮಾನಿಗಳು ಆಗಮಿಸಿದ್ದರು.

ಈ ವೇಳೆ ಕಾಂಗ್ರೇಸ್ ಮುಖಂಡರಾದ ಎಂ.ಶ್ರೀಕಾಂತ್, ಮಾಜಿ ಎಂಎಲ್ ಸಿ ಆರ್.
 
ಪ್ರಸನ್ನಕುಮಾರ್,ಮಾಜಿ ಮೇಯರ್ ಎಸ್.ಕೆ ಮರಿಯಪ್ಪ ಇದ್ದರು.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments