Webdunia - Bharat's app for daily news and videos

Install App

ಸಿಐಡಿ ಕ್ಲೀನ್ ಚಿಟ್: ಕೆ.ಜೆ.ಜಾರ್ಜ್‌ಗೆ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ

Webdunia
ಭಾನುವಾರ, 18 ಸೆಪ್ಟಂಬರ್ 2016 (16:34 IST)
ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸಿಐಡಿ ತನಿಖಾ ತಂಡಸ ಕ್ಲೀನ್ ಚಿಟ್ ನೀಡಿದ್ದರಿಂದ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಒಂದು ತಿಂಗಳು ಅಥವಾ ಒಂದು ವಾರದೊಳಗೆ ಜಾರ್ಜ್ ಮತ್ತೆ ಸಚಿವ ಸಂಪುಟ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
 
ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಜಾರ್ಜ್, ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಮುಖ್ಯಮಂತ್ರಿಯವ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಹತ್ಯೆಯಲ್ಲಿ ಮಾಜಿ ಸಚಿವ ಜಾರ್ಜ್ ಅವರ ಕೈವಾಡವಿಲ್ಲ ಎಂದು ಸಿಐಡಿ ತನಿಖಾ ತಂಡ ಕೊಡಗು ಜಿಲ್ಲೆಯ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ  ಜಾರ್ಜ್ ಮತ್ತೆ ಸಚಿವ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ.
 
ಕಳೆದ ಜುಲೈ ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂಸತ್ತಿನಲ್ಲಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ತ್ತಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾರ್ಜ್ ಅವರ ಸಚಿವ ಸ್ಥಾನದಿಂದ ಕೆಳಗಿಳಿಸಿ ತನಿಖೆಗೆ ಆದೇಶಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments