Select Your Language

Notifications

webdunia
webdunia
webdunia
Thursday, 10 April 2025
webdunia

ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ಸಿಗಬೇಕು : ಮಧು ಬಂಗಾರಪ್ಪ

ಶಿವಮೊಗ್ಗ
ಶಿವಮೊಗ್ಗ , ಗುರುವಾರ, 3 ಮಾರ್ಚ್ 2022 (11:37 IST)
ಶಿವಮೊಗ್ಗ : ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ಸಿಗುವಂತಾಗಬೇಕು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆಶಯ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣ ವ್ಯಾಸಂಗಕ್ಕೆ ಉಕ್ರೇನ್ಗೆ ತೆರಳಿದ್ದ ರಾಜ್ಯದ ನೂರಾರು ವಿದ್ಯಾರ್ಥಿಗಳು, ಉಕ್ರೇನ್ ಯುದ್ದ ಭೂಮಿಯಲ್ಲಿ ಸಿಲುಕಿದ್ದಾರೆ.

ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉತ್ತಮ ಶಿಕ್ಷಣ ದೊರೆತಿದ್ದರೆ, ಅಲ್ಲಿಗೆ ಯಾರು ಹೋಗುತ್ತಾರೆ? ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ದೊರೆಯುವಂತೆ ಆಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿ ಈಗ ಇರುವ ಕಾನೂನು ಬದಲಾವಣೆ ಮಾಡಬೇಕು. ಶಿಕ್ಷಣದ ಫೀಜ್ ಕಡಿಮೆ ಮಾಡಬೇಕು. ಈ ಬಗ್ಗೆ ಒಂದು ಅಭಿಯಾನವೇ ಆರಂಭಿಸಬೇಕಿದೆ ಎಂದು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದೆ ಉಕ್ರೇನ್ !