Publish Date: Tue, 16 Oct 2018 (19:26 IST)
Updated Date: Tue, 16 Oct 2018 (19:34 IST)
ವಿವಾದ ಹಾಗೂ ವಿರೋಧದ ನಡುವೆಯೇ ಟಿಪ್ಪು ಜಯಂತ್ಯುತ್ಸವವನ್ನು ಆಚರಿಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆ.
ಬಿಜೆಪಿ ಹಾಗೂ ಕೆಲವು ಸಂಘಟನೆಗಳ ವಿರೋಧದ ನಡುವೆಯೂ ಟಿಪ್ಪು ಜಯಂತ್ಯುತ್ಸವವನ್ನು ಆಚರಣೆ ಮಾಡಲು ಕಾಂಗ್ರೆಸ್- ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ ಮುಂದಾಗಿದೆ.
ನ.9ರಂದು ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆ ಮಾಡಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಬಿಜೆಪಿ ಮಾಡುವ ವಿರೋಧಕ್ಕೆ ಸರಕಾರ ಮಣಿಯುವುದಿಲ್ಲ ಎಂದು ಡಾ.ಜಿ.ಪರಮೇಶ್ವರ ಹೇಳಿದ್ದಾರೆ.