Select Your Language

Notifications

webdunia
webdunia
webdunia
webdunia

ಗಿರೀಶ್ ಕಾರ್ನಾಡ್ ನಿಧನಕ್ಕೆ ಗಣ್ಯರ ಸಂತಾಪ

ಗಿರೀಶ್ ಕಾರ್ನಾಡ್ ನಿಧನಕ್ಕೆ ಗಣ್ಯರ ಸಂತಾಪ
ಬೆಂಗಳೂರು , ಸೋಮವಾರ, 10 ಜೂನ್ 2019 (11:00 IST)
ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾದ  ಹಿನ್ನಲೆಯಲ್ಲಿ ಇವರ ಸಾವಿಗೆ ರಾಜಕೀಯ ನಾಯಕರುಗಳು  ಸಂತಾಪ ಸೂಚಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿದ ಕೇಂದ್ರ ಸಚಿವ ಸದಾನಂದಾ ಗೌಡರು, ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ .ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದ್ದಾರೆ.

 

ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು ಎಂದು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

 

ಇವರ ಜೊತೆಗೆ ಜಿಟಿ ದೇವೇಗೌಡರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಅರವಿಂದ ಕ್ರೇಜಿವಾಲ್, ಸುಷ್ಮಾ ಸ್ವರಾಜ್, ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ  ಗಿರೀಶ್ ಕಾರ್ನಾಡ್  ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಭೂಗತ ಪಾತಕಿ ರವಿ ಪೂಜಾರಿ ಸೆನಗಲ್‍ ನಿಂದ ಪಾರಾರಿ