ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಕೆಂಗೇರಿಯಲ್ಲಿನ ಅಪಾರ್ಟಮೆಂಟ್ ಒಂದರಲ್ಲಿ ಈ ಘಟನೆ ನಡೆದಿದ್ದು ಕಳ್ಳತನಕ್ಕೆ ಬಂದ ದುಷ್ಕರ್ಮಿಯೊಬ್ಬ ಮನೆಯಲ್ಲಿ ಒಂಟಿ ಯುವತಿ ಇದ್ದುದನ್ನು ಕಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಆತನಿಂದ ರಕ್ಷಿಸಿಕೊಳ್ಳುವಲ್ಲಿ ಯುವತಿ ಯಶಸ್ವಿಯಾಗಿದ್ದು, ಆತ ಮನೆಯಲ್ಲಿದ್ದ ಹಣ, ಚಿನ್ನಾಭರಣವನ್ನು ಕದ್ದುಕೊಂಡು ಆಕೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಬಳಿಕ ಕೆಂಗೇರಿ ಪೊಲೀಸ್ ಠಾಣೆಗೆ ಹೋದ ಯುವತಿ ದೂರು ನೀಡಿದ್ದಾಳೆ.
ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ವಿನೋದ್ ಎಂಬಾತನನ್ನು ಬಂಧಿಸಿದ್ದಾರೆ.
ನೀರಿನ ಪೈಪ್ ಹತ್ತಿ ಅಪಾರ್ಟಮೆಂಟ್ ಹತ್ತಿದ್ದ ಆತ ಕಳ್ಳತನದ ಉದ್ದೇಶದಿಂದಲೇ ಬಂದಿದ್ದ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ