ಕೋಲಾರ: ಉಯ್ಯಾಲೆ ಆಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಈ ಘಟನೆ ಮತ್ತೊಮ್ಮೆ ಸಾಕ್ಷಿಯಾಗಿದೆ. ಉಯ್ಯಾಲೆಯೇ ಉರುಳಾಗಿ 12 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೋಲಾರದ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ.
									
										
								
																	
12 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಈಕೆಯ ಜೊತೆಗೆ ಆಡುತ್ತಿದ್ದ ಇನ್ನೋರ್ವಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸದ್ಯಕ್ಕೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
									
			
			 
 			
 
 			
			                     
							
							
			        							
								
																	ಮನೆಯ ಛಾವಣಿಯ ಕುಣಿಕೆಗೆ ಅಕ್ಕ ಪಕ್ಕ ಉಯ್ಯಾಲೆ ಕಟ್ಟಿಕೊಂಡು ಬಾಲಕಿಯರು ಆಡುತ್ತಿದ್ದರು. ಅಕಸ್ಮಾತ್ತಾಗಿ ಎರಡೂ ಸೀರೆಗಳು ಒಂದಕ್ಕೊಂದು ಸುತ್ತಿಕೊಂಡು ದುರ್ಘಟನೆ ಸಂಭವಿಸಿದೆ.