Select Your Language

Notifications

webdunia
webdunia
webdunia
webdunia

ರೇಪ್ ಕೇಸ್‌: ಮತ್ತೇ ಯಡಿಯೂರಪ್ಪಗೆ ಬಿಗ್‌ ರಿಲೀಫ್

Girl Rape Case

Sampriya

ಬೆಂಗಳೂರು , ಗುರುವಾರ, 1 ಆಗಸ್ಟ್ 2024 (19:28 IST)
Photo Courtesy X
ಬೆಂಗಳೂರು: ಬಾಲಕಿಗೆ ಲೈಂಕಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಸಂಬಂಧ ಮತ್ತೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದ್ದಿ, ಈ ಮೂಲಕ ಬಿಎಸ್‌ವೈಗೆ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು, 'ಶಾಸಕರು'ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಈ ಕುರಿತಂತೆ ಆದೇಶಿಸಿದರು.

ವಿಚಾರಣೆ ವೇಳೆ ಬಿಎಸ್‌ವೈ ಪರ  ವಕೀಲ ಸಿ.ವಿ.ನಾಗೇಶ್‌  ಹಾಜರಾಗಿ 'ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆದ ಕಾರಣ ದೋಷಾರೋಪ ಪಟ್ಟಿಯನ್ನು ಪ್ರಶ್ನಿಸಿದ ತಿದ್ದುಪಡಿ ಅರ್ಜಿ ಸಲ್ಲಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ಕೋರಿ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಅರ್ಜಿ ತಿದ್ದುಪಡಿಗೆ ಾಕ್ಷೇಪಣೆ ಇಲ್ಲವೇ ಎಂದು ರಾಜ್ಯ ಪ್ರಾಸಿಕ್ಯೂಟರ್ ಅವರನ್ನು ನ್ಯಾಯಪೀಠ ಪ್ರಶ್ನಿಸಿತು.  ಇದಕ್ಕೆ ಬೆಳ್ಳಿಯಪ್ಪ, 'ಆಕ್ಷೇಪಣೆ ಇಲ್ಲ' ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ವಯನಾಡಿನ ಹಾಗೇ ಹಿಮಾಚಲ ಪ್ರದೇಶದಲ್ಲೂ ಭಾರೀ ದುರಂತ: ಇಬ್ಬರು ಸಾವು, 50 ಮಂದಿ ನಾಪತ್ತೆ