ಹುಮನಾಬಾದ್: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ತಾಲ್ಲೂಕಿನ ಅನುದಾನ ಸಹಿತ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ.
ಅನೇಕ ಸಲ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ, ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆಯೊಡ್ಡಿದ್ದಾನೆ. ಇದರಿಂದ ಹೆದರಿಕೊಂಡ ಬಾಲಕಿ ಶಾಲೆಗೆ ಹೋಗುವುದಿಲ್ಲ ಎಂದಿದ್ದಾಳೆ. ಪೋಷಕರು ಯಾಕೆ ಹೋಗಲ್ಲ ಎಂದು ಬಾಲಕಿ ಬಳಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಮದಿದೆ.
ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯಶಿಕ್ಷಕರಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಅಂತಿಮವಾಗಿ ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ಹುಮನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ.