ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆ!

Webdunia
ಸೋಮವಾರ, 22 ನವೆಂಬರ್ 2021 (13:12 IST)
ಮಂಗಳೂರು : ನಗರದ ಹೊರವಲಯದ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಟೈಲ್ಸ್ ಫ್ಯಾಕ್ಟರಿಯೊಂದರ ಆವರಣದ ಚರಂಡಿಯಲ್ಲಿ ಭಾನುವಾರ ಸಂಜೆ 8 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದ್ದು,
ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿ ಚರಂಡಿಗೆ ಎಸೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಝಾರ್ಖಂಡ್ ಮೂಲದ, ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ದಂಪತಿಯ ಪುತ್ರಿಯ ಮೃತದೇಹ ಇದಾಗಿದೆ ಎಂದು ಗುರುತಿಸಲಾಗಿದೆ. ಕುಟುಂಬ ಟೈಲ್ಸ್ ಫ್ಯಾಕ್ಟರಿಯಲ್ಲಿ ದುಡಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲೇ ವಾಸಿಸುತ್ತಿದ್ದರು. ಭಾನುವಾರವಾದ ಕಾರಣ ಫ್ಯಾಕ್ಟರಿಗೆ ರಜೆ ಇತ್ತು. ಹಾಗಾಗಿ ಕಾರ್ಮಿಕರೆಲ್ಲರು ವಿರಾಮದಲ್ಲಿದ್ದರು. ಈ ಸಂದರ್ಭ ಸಂಜೆ 4 ಗಂಟೆ ಸುಮಾರಿಗೆ ಬಾಲಕಿ ವಾಸ್ತವ್ಯ ಸ್ಥಳದಿಂದ ನಾಪತ್ತೆಯಾಗಿರುವುದನ್ನು ಗಮನಿಸಿದ ಪೋಷಕರು ಆಕೆಯನ್ನು ಹುಡುಕಲು ಶುರು ಮಾಡಿದ್ದರು.
ಬಾಲಕಿ ಸುಳಿವು ಸಿಗದೇ ಇದ್ದಾಗ ಬಾಲಕಿಯ ಪೋಷಕರು ಅಲ್ಲೇ ಆವರಣದಲ್ಲಿ ಕ್ರಿಕೆಟ್ ಆಡುತ್ತಿದ್ದ ಹುಡುಗರ ಗಮನಕ್ಕೆ ತಂದರು. ಬಳಿಕ ಪೋಷಕರು ಅವರೊಂದಿಗೆ ಪರಿಸರದಲ್ಲೆಲ್ಲ ಹುಡುಕಾಡಲು ಆರಂಭಿಸಿದರು. ಈ ಸಂದರ್ಭ ಸಂಜೆ 6 ಗಂಟೆಗೆ ಟೈಲ್ಸ್ ಫ್ಯಾಕ್ಟರಿಯ ಕೊಳಚೆ ನೀರು ಹರಿಯುವ ಚರಂಡಿಯಲ್ಲಿ ಬಾಲಕಿಯ ಮೃತದೇಹ ಬಿದ್ದಿರುವುದು ಕಂಡು ಬಂದಿತ್ತು. ತಕ್ಷಣ ಸ್ಥಳೀಯರ ನೆರವಿನಿಂದ ಈ ವಿಷಯವನ್ನು ಪೋಲೀಸರ ಗಮನಕ್ಕೆ ತರಲಾಯಿತು. ಮಂಗಳೂರು ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ತೆರಳಿ ಪ್ರಾಥಮಿಕ ತನಿಖೆ ನಡೆಸಿ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments