Webdunia - Bharat's app for daily news and videos

Install App

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

Sampriya
ಸೋಮವಾರ, 26 ಮೇ 2025 (21:07 IST)
ಬೆಂಗಳೂರು: ನಗರದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ಸಾವು ಪ್ರಕರಣ ಸಂಬಂಧ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು  ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಮಂಡ್ಯದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ  ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಹಸುಕಂದ ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು ನನ್ನ ಮನಸ್ಸನ್ನು ಕಲಕಿದೆ ಎಂದರು.

ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ ಅತ್ಯಂತ ಸೂಕ್ಷ್ಮವಾಗಿ ವರ್ತಿಸಬೇಕು. ವಾಹನಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ಏಕಾಏಕಿ ರಸ್ತೆಯಲ್ಲಿ ತಡೆದು ನಿಲ್ಲಿಸುವ ಅಥವಾ ಅವರಿಗೆ ಗಾಬರಿ ಉಂಟು ಮಾಡುವ ರೀತಿಯಲ್ಲಿ ವರ್ತಿಸಬಾರದು. ಸ್ವಲ್ಪ ಎಚ್ಚರ ವಹಿಸಿದ್ದಿದ್ದರೆ ಮಗುವಿನ ಸಾವನ್ನು ತಪ್ಪಿಸಬಹುದಿತ್ತು. ಭವಿಷ್ಯದಲ್ಲಿ ಇಂಥ ಅಚಾತುರ್ಯದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದರು.

ಸಾರ್ವಜನಿಕರು ಕೂಡ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಮ್ಮ ಜೀವದ ರಕ್ಷಣೆಗಾಗಿಯೇ ನಿಯಮಗಳನ್ನು ಮೀರಬಾರದು ಎಂಬುದು ನನ್ನ ವಿನಮ್ರ ಮನವಿ. ಈ ನಿಟ್ಟಿನಲ್ಲಿ ಪೊಲೀಸರು ಇನ್ನೂ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕು.

ಮೃತಪಟ್ಟ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ ????<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

Viral video ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಹಿಗ್ಗಾ ಮುಗ್ಗಾ ಥಳಿತ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಮುಂದಿನ ಸುದ್ದಿ
Show comments