Publish Date: Thu, 24 Aug 2017 (15:27 IST)
Updated Date: Thu, 24 Aug 2017 (15:28 IST)
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ದುಷ್ಕರ್ಮಿಗಳು ಹತ್ಯೆಗೈದ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಚಿಂತಾಮಣಿ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಗ್ರಾಮದ ಹೊರವಲಯದಲ್ಲಿ ಅತ್ಯಾಚಾರವೆಸಗಿ ನಂತರ ಕತ್ತುಹಿಸುಕಿ ಹತ್ಯೆಗೈಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಾಲಕಿಯ ಪೋಷಕರು ರಾತ್ರಿಯಿಡಿ ಹುಡುಕಾಟ ನಡೆಸಿದ್ದರೂ ಬಾಲಕಿ ಪತ್ತೆಯಾಗಿರಲಿಲ್ಲ. ಮಾರನೇ ದಿನ ಗ್ರಾಮದ ಹೊರವಲಯದಲ್ಲಿ ಬಾಲಕಿಯ ಜರ್ಜರಿತ ಮೃತದೇಹ ಪತ್ತೆಯಾಗಿತ್ತು.
ಅಪರಿಚಿತ ಆರೋಪಿಗಳ ವಿರುದ್ಧ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.