Publish Date: Sun, 30 Jul 2023 (07:05 IST)
Updated Date: Sun, 30 Jul 2023 (01:06 IST)
ಬೆಂಗಳೂರು: ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ರೇಪ್ ಆಗಿದೆ. ಇಲ್ಲಿ ಕ್ಯಾಮೆರಾ ಅಂತೀರಾ ಎಂದು ಉಡುಪಿ ವೀಡಿಯೋ ಪ್ರಕರಣ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ವೋಟ್ ಬ್ಯಾಂಕ್. ಮಧ್ಯದಲ್ಲಿ ಶಿಕಾರಿ ನಾವು. ಇಬ್ಬರೂ ನಮ್ಮನ್ನು ತೋರಿಸಿ ವೋಟು ಮಾಡಿದ್ರು. ಭಯೋತ್ಪಾದನೆ ಶುರುವಾಗುತ್ತಿದೆ ಎನ್ನುವುದೇ ಇವರಿಗೆ ಲೋಕಸಭಾ ವಿಷಯವಾಗಿದೆ. ಮಣಿಪುರದಲ್ಲಿ ಸುಡುತ್ತಿದೆ. ಅದರ ಬಗ್ಗೆ ಮಾತನಾಡುತ್ತಿಲ್ಲ. ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ರೇಪ್ ಆಗಿದೆ. ಇಲ್ಲಿ ಕ್ಯಾಮೆರಾ ಎನ್ನುತ್ತಿದ್ದೀರಾ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.
ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದ ಬಗ್ಗೆ ತನ್ವೀರ್ ಸೇಠ್ ಪತ್ರದ ವಿಚಾರವಾಗಿ ಮಾತನಾಡಿ, ನ್ಯಾಯಾಂಗ ತನಿಖೆ ಆಗಬೇಕು. ಇದು ಮತೀಯ ಗಲಭೆಯಲ್ಲ ಎಂದು ವರದಿ ಬಂದಿತ್ತು. ಎರಡು ತಂಡಗಳು ಡ್ರಗ್ಸ್ ಮಾಫಿಯಾ ನಡೆಸುತ್ತಿತ್ತು. ಡ್ರಗ್ಸ್ ಮಾರಾಟ ಮಾಡಲು ಆಗದವರು ಆ ದಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಹೇಳಿದ್ದಾರೆ.