Webdunia - Bharat's app for daily news and videos

Install App

ಗೀತಾ ಶಿವರಾಜ್‌ಕುಮಾರ್‌ ಕಾಂಗ್ರೆಸ್ ಸೇರ್ಪಡೆ ಉಹಾಪೋಹ: ಜಿ.ಪರಮೇಶ್ವರ್

Webdunia
ಮಂಗಳವಾರ, 13 ಜೂನ್ 2017 (13:41 IST)
ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವುದು ಕೇವಲ ಉಹಾಪೋಹ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
 
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಡಾ.ರಾಜ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ಚರ್ಚೆ ನಡೆದಿದೆ. ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಶಿವಮೊಗ್ಗದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನುವ ವರದಿಗಳು ಹರಡಿದ್ದವು.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರಿಗೆ ಗೀತಾ ಶಿವರಾಜ ಕುಮಾರ್‌ರನ್ನು ಮಾಜಿ ಸಿಎಂ ಬಂಗಾರಪ್ಪ ಪುತ್ರಿ ಎಂದು ಪರಿಚಯಿಸಿ, ಒಂದು ವೇಳೆ, ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಅವರಿಗೆ ಟಿಕೆಟ್ ನೀಡಿದಲ್ಲಿ ಗೆಲುವು ಖಚಿತ ಎಂದು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿದ್ದವು.
 
ಇದೀಗ ಸ್ಪಷ್ಟನೆ ನೀಡಿರುವ ಪರಮೇಶ್ವರ್, ಅಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಡಾ.ರಾಜಕುಮಾರ್ ನಿವಾಸದಲ್ಲಿ ರಾಜಕೀಯದ ಬಗ್ಗೆ ಚರ್ಚೆಯೇ ಆಗಿಲ್ಲ. ರಾಹುಲ್ ಗಾಂಧಿ ಡಾ.ರಾಜ್ ಕುಟುಂಬಕ್ಕೆ ಸಾಂತ್ವನ ಹೇಳಲು ಮಾತ್ರ ತೆರಲಿದ್ದರು ಎಂದು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments