Publish Date: Sun, 18 Dec 2022 (19:06 IST)
Updated Date: Sun, 18 Dec 2022 (19:09 IST)
ರಾಜ್ಯ ರಾಜಕೀಯದಲ್ಲಿ ಕುಕ್ಕರ್ ಬಾಂಬ್ ಜಟಾಪಟಿ ತಾರಕಕ್ಕೇರಿದೆ. ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಲ್ಲಿ ನಡೆದ ಬ್ಲಾಸ್ಟ್ ಕೇಸ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕೇಸರಿ ಕಲಿಗಳು ಡಿಕೆಶಿ ವಿರುದ್ಧ ವಾಕ್ಸಮರ ನಡೆಸಿದ್ದಾರೆ. ಇದೀಗ ಕಂದಾಯ ಸಚಿವ ಆರ್.ಅಶೋಕ್ ಕೂಡ ಲೇವಡಿ ಮಾಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಅವರಿಗೆ ಅಮಾಯಕ ನೋಬೆಲ್ ಪ್ರಶಸ್ತಿ ಪ್ರದಾನ ಮಾಡಬೇಕು. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ದಲಿತರ ಮನೆಯಲ್ಲಿ ಉಪಾಹಾರ ಸೇವಿಸಿ ಮಾತನಾಡಿದ ಆರ್ ಅಶೋಕ್, ಬಾಂಬ್ ಸ್ಫೋಟಿಸಿದ ವ್ಯಕ್ತಿ ಅಮಾಯಕ ಎಂದು ಡಿಕೆಶಿ ಹೇಳಿದ್ದಾರೆ. ಒಬ್ಬ ಭಯೋತ್ಪಾದಕನಿಗೆ ಅಮಾಯಕ ಎನ್ನುವುದಕ್ಕೆ ಏನು ಹೇಳಬೇಕು. ಕಾಂಗ್ರೆಸ್ ಮುಖಂಡರು ಯಾವತ್ತೂ ಬಹುಸಂಖ್ಯಾತರ ಬಗ್ಗೆ ಮಾತನಾಡಿಯೇ ಇಲ್ಲ. ಬರೀ ಅಲ್ಪಸಂಖ್ಯಾತರನ್ನು ಓಲೈಸುತ್ತಾರೆ ಎಂದು ಆರ್.ಅಶೋಕ್ ಆರೋಪಿಸಿದ್ದಾರೆ.