ನರೇಂದ್ರ ಮೋದಿಯವರು ಚುನಾವಣೆ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಭೇಟಿ ಕೊಡ್ತಾರೆ. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲ್ಲ. ಮೋದಿಯವರು ಕಂಟ್ರಾಕ್ಟರ್ ಸಂಘದ ಅಧ್ಯಕ್ಷ ಕೆಂಪಣ್ಣನವರ ಪತ್ರಕ್ಕೆ ಉತ್ತರ ಕೊಡಲಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಭಾಷಣದ ವೇಳೆಯೂ ನಾವು ನಮ್ಮ ನಾಯಕರ ಎಲ್ಲರ ಹೆಸರು ಹೇಳುತ್ತೇವೆ. ಆದರೆ ಮೋದಿಯವರು ಯಾರ ಹೆಸರನ್ನೂ ಹೇಳಲ್ಲ. ಬೊಮ್ಮಾಯಿ, ಬಿ.ಎಸ್.ವೈ ಸೇರಿದಂತೆ ಯಾರ ಹೆಸರನ್ನೂ ಹೇಳಲ್ಲ ಎಂದರು. ಬರೀ ಅವರ ಬಗ್ಗೆ ಅವರೇ ಹೇಳಿಕೊಳ್ಳುತ್ತಾರೆ ಇದನ್ನ ನಿಲ್ಲಿಸಬೇಕು ಎಂದ ಅವರು, ಸುಡು ಬಿಸಿಲಿನ ಮಧ್ಯೆಯೂ ರೋಡ್ ಶೋನಲ್ಲಿ ಭಾಗಿಯಾಗಿದ್ದ ಸಾವಿರಾರು ಜನರಿಗೆ ಅಭಿನಂದನೆ ಸಲ್ಲಿಸಿದರು.
ನಿಮ್ಮ ಸರ್ಕಾರವನ್ನ ಕಳ್ಳತನ ಮಾಡಿದ್ದು ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿ ರೋಡ್ ಶೋಗೆ ಬಂದಿದ್ದ ರಾಣಿ ಎಂಬ ಮಹಳೆಯನ್ನ ಮಾತನಾಡಿಸಿ, ದೇಶದಲ್ಲಿ ನಿಮ್ಮಂತಹ ಕೋಟ್ಯಂತರ ರಾಣಿಯರು ಇದ್ದಾರೆ. ತುಂಬಾ ಕಷ್ಟದಲ್ಲಿದ್ದಾರೆ. ಸರ್ಕಾರ ನಿಮಗೆಲ್ಲಾ ಏನೂ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಬಡವರ ಏಳಿಗೆಗೆ ಶ್ರಮಿಸಲಿದೆ ಎಂದರು.