Select Your Language

Notifications

webdunia
webdunia
webdunia
webdunia

ಮಠ ಮಂದಿರ ಬಿಡಿ ಶಿಕ್ಷಣದತ್ತ ಗಮನಕೊಡಿ: ಸಚಿವ ಅಂಜನೇಯ ಸಲಹೆ

ಮಠ ಮಂದಿರ ಬಿಡಿ ಶಿಕ್ಷಣದತ್ತ ಗಮನಕೊಡಿ: ಸಚಿವ ಅಂಜನೇಯ ಸಲಹೆ
ಬೆಂಗಳೂರು , ಶನಿವಾರ, 15 ಅಕ್ಟೋಬರ್ 2016 (12:41 IST)
ದೇಗುಲ, ಮಠ, ಮಂದಿರಗಳಿಗೆ ಹೋಗುವುದನ್ನು ಕಡಿಮೆ ಮಾಡಿ, ಶಿಕ್ಷಣದತ್ತ ಗಮನ ಕೊಡಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ವಾಲ್ಮೀಕಿ ಸಮುದಾಯಕ್ಕೆ ಕಿವಿಮಾತು ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದ ಜನತೆ ವಿಧಾನಸೌಧ, ಸಂಸತ್‌ಗೆ ಬರುವತ್ತ ಗಮನ ನೀಡಬೇಕು ಎಂದು ಹೇಳಿದರು.
 
ವಾಲ್ಮೀಕಿ ಪ್ರತಿಮೆ ಸ್ಥಾಪಿಸುವಂತೆ ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಳಿ ಮನವಿ ಮಾಡಿಕೊಂಡಿದ್ದೇವು. ಅದರಂತೆ ಈಗ ಶಾಸಕರ ಭವನದ ಎದುರು ವಾಲ್ಮೀಕಿ ಪ್ರತಿಮೆ ಸ್ಥಾಪನೆಯಾಗಿದೆ ಎಂದು ಹೇಳಿದರು. 
 
10 ಎಕರೆ ಪ್ರದೇಶದಲ್ಲಿ ವಾಲ್ಮೀಕಿ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಸ್ಥಾಪಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಮಾಹಿತಿ ನೀಡದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಸಾದ್, ಅಂಬರೀಶ್, ಜಾರಕಿಹೊಳಿ ಜೆಡಿಎಸ್‌ಗೆ ಬಂದ್ರೆ ಸ್ವಾಗತ: ದೇವೇಗೌಡ