Select Your Language

Notifications

webdunia
webdunia
webdunia
webdunia

ಹಿಜಾಬ್ ಹಾಕಲು ಅನುಮತಿ ಕೊಡಿ - ಸಿದ್ದರಾಮಯ್ಯ

ಹಿಜಾಬ್ ಹಾಕಲು ಅನುಮತಿ ಕೊಡಿ - ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 18 ಫೆಬ್ರವರಿ 2022 (17:06 IST)
ಹಿಜಾಬ್ ಬಗ್ಗೆ ಅನಗತ್ಯವಾಗಿ ವಿವಾದ ಹುಟ್ಟು ಹಾಕುತ್ತಿದ್ದಾರೆ ಎಂದು ಸಂಘ ಪರಿವಾರದವರ ವಿರುದ್ಧ, ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಹುತೇಕ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಾರೆ.
ಹಿಜಾಬ್ ಧರಿಸುವುದ ರಿಂದ ಯಾರಿಗೂ ತೊಂದರೆಯಾಗಲ್ಲ. ಕೋರ್ಟ್ ಕೂಡ ಹಿಜಾಬ್ ವಿಚಾರ ಗಂಭೀರವಾಗಿ ಪರಿಗಣಿಸಿದೆ. ಧರ್ಮ ಹಾಗೂ ಸಂಪ್ರದಾಯಕ್ಕೆ ಯಾರೂ ಅಡ್ಡಿಪಡಿಸಬಾರದು. ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಬರ್ತಿದ್ದಾರೆ. ಮೊದಲು ಶಾಲೆಗೆ ಹೋಗುವವರ ಸಂಖ್ಯೆ ಬಹಳ ಕಡಿಮೆಯಿತ್ತು. ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹುನ್ನಾರ ಸಂಘ ಪರಿವಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಳಿನ್ ಕುಮಾರ್ ಕಟೀಲ್ ವಿರುದ್ಧ ಕೊಲೆ ಬೆದರಿಕೆ ಆರೋಪ