Select Your Language

Notifications

webdunia
webdunia
webdunia
webdunia

ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅನುಮತಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅನುಮತಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು , ಶುಕ್ರವಾರ, 27 ಫೆಬ್ರವರಿ 2015 (16:14 IST)
ಶಿಕ್ಷಣ ಮಾಧ್ಯಮ ವಿಚಾರಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಶಾಲೆಗಳಿಗಳಿಗೆ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಇಂದು ಆದೇಶಿಸಿದೆ.
 
ಹೈಕೋರ್ಟ್‌ ನ್ಯಾಯಾಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶವನ್ನು ನೀಡಿದ್ದು, ಮಾರ್ಚ್ 31ರ ಒಳಗೆ ಬರುವ ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡುವಂತೆ ಆದೇಶಿಸಿದೆ. ಅಲ್ಲದೆ ಕ್ಯುರೇಟೀವ್ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ನೀಡುವ ಯಾವುದೇ ಆದೇಶಕ್ಕೆ ಬದ್ಧರಾಗಿರುವಂತೆ ಸೂಚಿಸಿದ ನ್ಯಾಯಾಧೀಶರು, ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪನ್ನೂ ಕೂಡ ಪಾಲಿಸುತ್ತಿಲ್ಲ. ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿದ್ದು, ನ್ಯಾಯಾಂಗ ನಿಂದನೆಯಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.  
 
ಪ್ರಕರಣದ ಹಿನ್ನೆಲೆ: ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿಯೇ ನೀಡಬೇಕೆಂದು ಸರ್ಕಾರ ಶಾಲೆಗಳಿಗೆ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಾದ-ವಿವಾದಗಳನ್ನು ಆಲಿಸಿದ್ದ ಸುಪ್ರೀಂ, ಬಳಿಕ ತಮ್ಮ ಮಕ್ಕಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂದು ತೀರ್ಮಾನಿಸುವುದು ಪೋಷಕರಿಗೆ ಬಿಟ್ಟಿದ್ದು. ಆದರೆ ಈ ವಿಷಯದಲ್ಲಿ ಸರ್ಕಾರ ಹೊರಡಿಸಿರುವ ಆದೇಶ ಸರಿಯಲ್ಲ. ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ರಾಜ್ಯ ಸರ್ಕಾರದ ವಿರುದ್ಧ ತೀರ್ಪು ನೀಡಿತ್ತು. ಆದರೆ ಮರು ಪ್ರಯತ್ನವನ್ನು ಮಾಡಲು ಯತ್ನಿಸುತ್ತಿರುವ ಸರ್ಕಾರ, ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟೀವ್ ಅರ್ಜಿಯನ್ನು ಸಲ್ಲಿಸಿ ಆದೇಶದ ಪುನರ್ ಪರಿಶೀಲನೆಗೆ ಮನವಿ ಮಾಡಿದೆ. ಆದರೆ ಸುಪ್ರೀಂ ಸರ್ಕಾರದ ಈ ಅರ್ಜಿಯನ್ನು ಇನ್ನೂ ಕೈಗೆತ್ತಿಕೊಂಡಿಲ್ಲ. 
 
ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಶಾಲೆಗಳ ಒಕ್ಕೂಟವು ಸುಪ್ರೀಂ ಕೋರ್ಟ್ ತಮ್ಮ ಪರವಾಗಿ ತೀರ್ಪಿತ್ತಿದ್ದರೂ ಕೂಡ ರಾಜ್ಯ ಸರ್ಕಾರ ಇಂಗ್ಲೀಷ್ ಶಿಕ್ಷಣದಲ್ಲಿ ಬೋಧಿಸಲು ಅನುಮತಿ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅನುಮತಿ ಕೊಡಿಸಿ ಎಂದು ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಕೂಡಲೇ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. 
 
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಸರ್ಕಾರದ ಅಡ್ವೋಕೇಟ್ ಜನರಲ್ ಅವರಿಂದ ಸೂಕ್ತ ಮಾಹಿತಿ ಪಡೆದಿತ್ತು. 

Share this Story:

Follow Webdunia kannada